ಅಂಕೋಲಾ : ತಾಲೂಕಿನ ಶಿರೂರು ಗ್ರಾಮದಲ್ಲಿ ಗುಡ್ಡ ಕುಸಿದು ,ಗಂಗಾವಳಿ ನದಿ ನೀರು ನುಗ್ಗಿ ಹಾನಿ ಸಂಭವಿಸಿದ ಉಳುವರೆ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮನೆ ಹಾನಿ ಸಂಭವಿಸಿದ ಕುಟುಂಬಗಳಿಗೆ ತುರ್ತು ಪರಿಹಾರವಾಗಿ ತಲಾ 1ಲಕ್ಷ 20 ಸಾವಿರ ಪರಿಹಾರದ ಚೆಕ್ಕುಗಳನ್ನು ವಿತರಿಸಿ,ಸಂಪೂರ್ಣ ಹಾನಿಗೊಳಗಾದ ಕುಟುಂಬಗಳಿಗೆ ಮತ್ತೆ 5 ಲಕ್ಷ ರೂ , ಹಾಗೂ ಭಾಗಶ: ಹಾನಿಗೊಳಗಾದ ಮನೆಗಳಿಗೆ ಹಾನಿ ಅಂದಾಜಿಸಿ ಪರಿಹಾರ ನೀಡುವುದಾಗಿ ತಿಳಿಸಿದರು.
ಉಳುವರೆ ಗ್ರಾಮದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು ಹಾನಿಯ ಸಂಪೂರ್ಣ ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ,
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣ ಅಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ ಎಂ.ನಾರಾಯಣ, ಸಹಾಯಕ ಆಯುಕ್ತೆ ಕಲ್ಯಾಣಿ ಕಾಂಬಳೆ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.ಗುಡ್ಡ ಕುಸಿತ ದುರಂತದಲ್ಲಿ ಶಿರೂರಿನ ಒಂದೇ ಕುಟುಂಬದ ಮೂವರ ಮೃತ ದೇಹ ಪತ್ತೆಯಾಗಿದ್ದು,ನೊಂದ ಕುಟುಂಬಕ್ಕೆ ,ಮೃತ ವ್ಯಕ್ತಿಯ ಹೆಸರಿನಲ್ಲಿ ತಲಾ 5 ಲಕ್ಷದಂತೆ ಒಟ್ಟೂ 15 ಲಕ್ಷ ರೂಗಳ ಪರಿಹಾರ ಧನದ ಚೆಕ್ಕನ್ನು, ಮೃತರ ಕುಟುಂಬದ ವಾರಸುದಾರರಿಗೆ ಹಸ್ತಾಂತರಿಸಿದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ