ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತ ಪ್ರಕರಣ ಹೆಚ್ಚುತ್ತಲೇ ಇದೆ. ಅಲ್ಲದೆ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜು ಗಳಿಗೆ ನಾಳೆ ಜುಲೈ 20 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್