Follow Us On

WhatsApp Group
Important
Trending

ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ

ಕಾರವಾರ: ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 01.08.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ: 02-08-2024 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ರೆಡ್ ಅಲರ್ಟ್ ಸೂಚನೆ ನೀಡಿದೆ. ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಸಹಾಯ ಆಯುಕ್ತರರು ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ವಿವರಿಸಿರುತ್ತಾರೆ.

ಜಿಲ್ಲೆಯ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ದಿನಾಂಕ: 02-08-2024 ರಂದು ರಜೆ ಘೋಷಿಸಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

Back to top button