Follow Us On

WhatsApp Group
Focus News
Trending

ಸ್ವಾತಂತ್ರ‍್ಯ ದಿನಾಚರಣೆ ವೇಳೆ ಪ್ಲಾಸ್ಟಿಕ್ ಧ್ವಜ ಬಳಕೆ ಬೇಡ: ಪರಿಸರ ಸ್ನೇಹಿಯಾಗಿ ಆಚರಿಸಿ

ಕಾರವಾರ: ಆಗಸ್ಟ್ 15 ರಂದು ಆಚರಿಸುವ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರಿಕೆ ವಹಿಸಿ ಪ್ಲಾಸ್ಟಿಕ್ ಮುಕ್ತ ಸ್ವಾತಂತ್ರ‍್ಯ ದಿನಾಚರಣೆ ಆಚರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ‍್ಯ ದಿನಾಚರಣೆ ಆಯೋಜನೆಯ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬ್ಯಾನರ್, ಪ್ಲಾಸ್ಟಿಕ್ ರಾಷ್ಟ್ರಧ್ವಜ ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್‌ನಿಂದ ತಯಾರಿಸಿದ ಯಾವುದೇ ರೀತಿಯ ವಸ್ತುಗಳನ್ನು ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಪರಿಸರ ಸ್ನೇಹಿಯಾಗಿ, ಅರ್ಥಪೂರ್ಣವಾಗಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸುವಂತೆ ತಿಳಿಸಿದರು.

ವಿಸ್ಮಯ ನ್ಯೂಸ್, ಕಾರವಾರ

Back to top button