Follow Us On

WhatsApp Group
Important
Trending

ಹೆಂಡತಿಯನ್ನು ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಸಿದ್ದಾಪುರ: ಹೆಂಡತಿಯನ್ನು ಹತ್ಯೆ ಮಾಡಿದ್ದ ಆರೋಪಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ಸಿದ್ದಾಪುರ ತಾಲೂಕಿನ ಹೆಗ್ಗೋಡಮನೆಯ ಮಂಜುನಾಥ ಕೆರಿಯಾ ನಾಯ್ಕ ಎಂಬಾತನು ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣವನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button