Follow Us On

WhatsApp Group
Important
Trending

ಭೂಕುಸಿತದ ಪ್ರದೇಶ ನಿಖರವಾಗಿ ಗುರುತಿಸಿ ಕಣ್ಗಾವಲು: ಸ್ಥಳದ ಮೇಲೆ ನಿಗಾ ಇಡಲು ಸ್ಪಾಟರ್ಸ್ ಗಳ ನೇಮಕ

ಗುಡ್ಡಕುಸಿತದ ಅಪಾಯ ತಪ್ಪಿಸಲು ಜಿಲ್ಲಾಡಳಿತದ ಯೋಜನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಅತಿಯಾಗಿ ಭೂಕುಸಿತವಾಗುತ್ತಿದೆ. ಇದರಿಂದ ಸಂಭವಿಸುವ ಅಪಾಯಗಳನ್ನು ತಪ್ಪಿಸಿ, ಜನ, ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಮುಂಚಿತವಾಗಿ ಮುನ್ನೆಚರಿಕೆ ವಹಿಸುವ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ, ಭೂ ಕುಸಿತ ಪ್ರದೇಶಗಳನ್ನು ನಿಖರವಾಗಿ ಗುರುತಿಸಿ, ಭೂ ಕುಸಿತ ಸಂಭವಿಸುವುದರ ಬಗ್ಗೆ ಮುಂಚಿತವಾಗಿ ಜಿಲ್ಲಾಡಳಿತ ಮತ್ತು ಸಂಬoಧಪಟ್ಟ ವ್ಯಾಪ್ತಿಯ ಅಧಿಕಾರಿಗಳಿಗೆ ಮಾಹಿತಿ ನೀಡುವ ವ್ಯಕ್ತಿಗಳನ್ನು ನಿಯೋಜಿಸಲು ಯೋಜನೆ ರೂಪಿಸಲಾಗಿದೆ.

ಭಾರತೀಯ ಭೂವಿಜ್ಞಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ 439 ಅಪಾಯಕಾರಿ ಭೂಕುಸಿತ ಸ್ಥಳಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರದಿಂದ ಜಿಲ್ಲೆಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಭೂಕುಸಿತವಾಗುವ ಸ್ಥಳಗಳನ್ನು ಗುರುತಿಸಿದ್ದು, ಈ ಸ್ಥಳಗಳ ಪಟ್ಟಿಗಳನ್ನು ಸದ್ರಿ ಅಪಾಯಕಾರಿ ಭೂಕುಸಿತ ಸ್ಥಳಗಳಲ್ಲಿ ತಮ್ಮ ವ್ಯಾಪಿಯಲ್ಲಿ ಬರುವ ಸ್ಥಳಗಳಿಗೆ, ಸೂಕ್ತ ಗುರುತು ಮಾಡುವ ವ್ಯಕ್ತಿಗಳನ್ನು ಆಯಾ ತಾಲೂಕುಗಳ ಹಂತದಲ್ಲಿ ನಿಯೋಜಿಸಿ, ಆ ಭೂ ಕುಸಿತ ಪ್ರದೇಶಗಳ ಮೇಲೆ ನಿಗಾ ವಹಿಸುವ ಕುರಿತು ಸೂಚನೆ ನೀಡಲಾಗಿದೆ.

ಅಪಾಯಕಾರಿ ಭೂಕುಸಿತ ಸ್ಥಳಗಳ ಮೇಲೆ ನಿಗಾ ವಹಿಸಲು ನಿಂಯೋಜಿಸುವ ಗುರುತು ಮಾಡುವ ವ್ಯಕ್ತಿಗಳಿಗೆ ಭಾರತೀಯ ಭೂ ವಿಜ್ಞಾನ ಇಲಾಖೆಯಿಂದ ತರಬೇತಿಯನ್ನು ನೀಡಲಾಗುತ್ತದೆ. ಈ ವ್ಯಕ್ತಿಗಳು ಪ್ರತಿನಿತ್ಯ ಅಂತಹ ಸ್ಥಳವನ್ನು ಪರಿಶೀಲಿಸಿದ ಬಗ್ಗೆ ಅಲ್ಲಿನ ಸ್ಥಿತಿಗತಿಗಳ ಅವಲೋಕನ ಮಾಡಿ ಕಚೇರಿಗೆ ವರದಿಯನ್ನು ಸಲ್ಲಿಸಬೇಕಾಗಿದೆ.

ಪ್ರಸ್ತುತ ಗುರುತಿಸಲಾಗಿರುವ ಭೂ ಕುಸಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಗುರುತು ಮಾಡುವ ವ್ಯಕ್ತಿಗಳನ್ನಾಗಿ ನೇಮಿಸಲು ಉದ್ದೇಶಿಸಲಾಗಿದ್ದು, ಇವರಿಂದ ಭೂ ಕುಸಿತದ ಮಾಹಿತಿಯನ್ನು ತ್ವರಿತವಾಗಿ ಪಡಯಲು ಹಾಗೂ ಮುನ್ನೆಚ್ಚರಿಕೆ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Back to top button