ವಿದ್ಯುತ್ ತಂತಿ ಮೇಲೆ ಬಿದ್ದ ತೆಂಗಿನ ಹೆಡೆ: ತಂತಿ ತುಂಡಾಗಿ ಮೈ ಮೇಲೆ ಬಿದ್ದು ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಸಿದ್ದಾಪುರ: ತೆಂಗಿನ ಹೆಡೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿ ಮೈ ಮೇಲೆ ಬಿದ್ದು ವಿದ್ಯುತ್ ಶಾಕ್ ತಗುಲಿ ಯುವಕ ಮೃತಪಟ್ಟ ಘಟನೆ ಮನ್ಮನೆ ಯಲ್ಲಿ ನಡೆದಿದೆ. ದೇವರಾಜ್ ರಾಮ ನಾಯ್ಕ್ (28) ಮೆಣಸಿ ಮೃತ ದುರ್ದೈವಿ. ಕೆಲಸ ಮಾಡಿದ ಕೂಲಿ ಹಣವನ್ನು ಪಡೆದು ವಾಪಸ್ ತೆಗೆದುಕೊಂಡು ಹೋಗುವಾಗ ತೆಂಗಿನ ಹೆಡೆ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಈ ವೇಳೆ ತಂತಿ ತುಂಡಾಗಿ ದೇವರಾಜ್ ಮೈ ಮೇಲೆ ಬಿದ್ದು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version