Important
Trending

ಎರಡನೆ ಬಾರಿ ಗೋ ಕಳ್ಳತನ ಮಾಡಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳರು: ಕಾರು ಬಿಟ್ಟು ಆರೋಪಿಗಳು ಪರಾರಿ

ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರು
ಐಷಾರಾಮಿ ಕಾರಿನಲ್ಲಿ ಗೋ ಸಾಗಾಟ ಪತ್ತೆ

ಭಟ್ಕಳ: ಕಳೆದ ಒಂದು ವಾರದ ಹಿಂದೆಯಷ್ಟೇ ತಾಲೂಕಿನ ವಿ.ವಿ ರಸ್ತೆಯಲ್ಲಿ ರಾತ್ರಿ ವೇಳೆ ಹಿಂಸಾತ್ಮಕವಾಗಿ ನೋಂದಣಿ ಇಲ್ಲದ ಕಾರಿನಲ್ಲಿ ಜಾನುವಾರಗಳನ್ನು ತುಂಬಿಕೊoಡು ಹೋಗಿದ್ದ ಪ್ರಕರಣಕ್ಕೆ ಸಂಬAಸಿದ ಕಾರು ಮತ್ತೆ ಬುಧವಾರ ರಾತ್ರಿ ಒಂದು ಜಾನುವಾರು ಕಳುವು ಮಾಡಿಕೊಂಡು ಹೊಗುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ವೇಳೆ ಆರೋಪಿಗಳು ಕಾರು ಬಿಟ್ಟು ಪರಾರಿಯಾದ ಘಟನೆ ನಡೆದಿದೆ.


ಆಗಸ್ಟ್ 28 ರ ಮುಂಜಾನೆ 4.15 ರಿಂದ 5 ಗಂಟೆಯ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಕಾರಿನಲ್ಲಿ ನಾಲ್ವರು ಗೋ ಕಳ್ಳರು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಾನುವಾರನ್ನು ಕೈಕಾಲು ಕಟ್ಟಿ ಕಾರಿನ ಹಿಂಬದಿಯಲ್ಲಿ ತುಂಬುತ್ತಿರುವ ದ್ರಶ್ಯ ಇಲ್ಲಿನ ವಡೇರ ಮಠ ದೇವಸ್ಥಾನದ ಸಿ.ಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಕಳ್ಳತನವಾದ ಜಾನುವಾರು ಮಾಲೀಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ತನಿಖೆ ಆರಂಭಿಸಿದ್ದರು.

ಆದರೆ ನಿನ್ನೆ ಮತ್ತೆ ಅದೇ ಕಾರಿನಲ್ಲಿ ಜಾನುವಾರು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವೇಳೆ ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ. ಸ್ವಲ್ಪ ದೂರ ಪೊಲೀಸರು ಕಾರನ್ನು ಬೆನ್ನತ್ತಿದ್ದು ನಂತರ ಆರೋಪಿಗಳು ಕಾರನ್ನು ತಾಲೂಕಿನ ಮಗ್ದಮ್ ಕಾಲೋನಿಯ ಸಮೀಪ ಬಿಟ್ಟು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿ ನೋಡಿದಾಗ ಕಾರಿನ ಹಿಂಬದಿಯಲ್ಲಿ ಒಂದು ಜಾನುಮಾರು ಮತ್ತು ಒಂದು ಲಾಂಗ್ (ಮಾರಕಾಸ್ತ್ರ ) ಪತ್ತೆಯಾಗಿದೆ.


ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button