Follow Us On

WhatsApp Group
Focus News
Trending

ಮನವಿಗೆ ಸ್ಪಂದಿಸಿದ ಪ್ರಧಾನಿ: ಶಿರೂರು ಗುಡ್ಡ ಕುಸಿತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಹಣ ಮಂಜೂರು

ಶಿರೂರು ಗುಡ್ಡ ಕುಸಿತಕ್ಕೆ ಸಂಬoಧಿಸಿದoತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ವಿಶೇಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಆದೇಶ ಮಾಡಿರುವ ಪ್ರಧಾನಿ ಮೋದಿ ಪಿಎಂಎನ್‌ಆರ್‌ಎಫ್ ಯೋಜನೆಯಡಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ 2 ಲಕ್ಷ ರೂ. ಈ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ಹಣ ಮಂಜೂರು ಮಾಡಿ ಆದೇಶಿಸಿದ್ದಾರೆ. ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಸಂಬoಧ ಪಟ್ಟ ಆಡಳಿತಕ್ಕೆ ನೀಡಬೇಕಿದ್ದು, ನೇರವಾಗಿ ಸಂತ್ರಸ್ತರ ಖಾತೆಗೆ ಹಣ ಜಮಾ ಆಗಲಿದೆ.

ಇದಕ್ಕೂ ಮುನ್ನ ಸಂಸದ ಕಾಗೇರಿ ವಿಶೇಷ ಪ್ರಕರಣದಡಿ ಕೇಂದ್ರಸರ್ಕಾರದ ಪರಿಹಾರ ನಿಧಿಯಡಿ ಹಣ ಬಿಡುಗಡೆ ಮಾಡಬೇಕೆಂದು ಜುಲೈ 31 ರಂದು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಕಾಗೇರಿ ಅವರು ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಧಾನಿಯವರು ಶಿರೂರು ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪ್ರಧಾನಿಯವರ ವಿಪತ್ತು ನಿಧಿಯಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ನೀಡಿದ್ದರು. ಪ್ರಧಾನಿ ಅವರ ಸ್ಪಂದನೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button