Important
Trending

ಮಾರಕಾಸ್ತ್ರ ಹಿಡಿದು ದರೋಡೆಗೆ ನಿಂತಿದ್ದ ಯುವಕರ ಗ್ಯಾಂಗ್ ಹೆಡೆಮುರಿ ಕಟ್ಟಿದ ಶಿರಸಿ ಪೊಲೀಸರು

ಶಿರಸಿ ಪೋಲೀಸರ ಕಾರ್ಯಾಚರಣೆ
ಮಾರಕಾಸ್ತ್ರ ಹಿಡಿದು ದರೋಡೆಗೆ ಪ್ಲಾನ್ ರೂಪಿಸಿದ್ದ ಗ್ಯಾಂಗ್
ಅಂದರ್

[sliders_pack id=”1487″]

ಶಿರಸಿ: ಅಮಾಯಕರಂತೆ ಕಾಣುವ ಈ ಮುಖಗಳನ್ನು ಒಮ್ಮೆ ನೋಡಿ. ಆದ್ರೆ, ಇವರು ಅಮಾಯಕರಲ್ಲ. ಅಮಾಯಕರಂತೆ ಕಾಣುವರಾಕ್ಷಸ ವೇಷಧಾರಿಗಳು .ಹೌದು, ಮಾರಕಾಸ್ತ್ರಗಳನ್ನು ಬಳಸಿಕೊಂಡು ದರೋಡೆ ನಡೆಸಲು ಹೊರಟಿದ್ದ ಯುವಕರ ತಂಡವನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ದರೋಡೆಗೆ ಬಳಸುವ ವಸ್ತುಗಳು ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದಿರುವುದು ಯಲ್ಲಾಪುರ ರಸ್ತೆಯ ಸಹ್ಯಾದ್ರಿ ತಗ್ಗಿನಲ್ಲಿ.

ಪ್ರಮುಖ ಆರೋಪಿ ಪರಾರಿ

ವಿದ್ಯಾ ನಗರದ ಕಸ್ತೂರಬಾ ನಗರದ ಮಹಮ್ಮದ್ ಯಾಸೀನ್ (23), ಮುರುಗೇಶ ಪೂಜಾರಿ (20), ಸವಣೂರಿನ ಮಯಾನಿ ಮೊಹಲ್ಲಾದ ಅಜ್ಮಿತ್ ಅಸ್ಲಾಂ (19), ಗುಲಾಮ್ ಮುಸ್ತಫಾ (19), ಗಾಂಧಿ ನಗರದ ಮರ್ದಾನ್ ಶಫಿಸಾಬ (19) ಹಾಗೂ ಮರಾಠಿಕೊಪ್ಪದ ಚರಣ್ ನಾಯ್ಕ (19) ಬಂಧಿತ ಆರೋಪಿಗಳಾಗಿದ್ದಾರೆ. ಇವರಲ್ಲಿ ಕೃತ್ಯದ ಮುಖ್ಯ ಆರೋಪಿಯಾಗಿದ್ದ ಮಂಜುನಾಥ ಅಲಿಯಾಸ್ ಮಿಂಟಾ ಮಾರುತಿ ಪೂಜಾರಿ ತಪ್ಪಿಸಿಕೊಂಡಿದ್ದಾನೆ.


ಇವರು ಮಾರಕಾಸ್ತ್ರಗಳಾದ ಬಡಿಗೆ, ರಾಡ್, ಖಾರದ ಪುಡಿ, ಚಾಕುವಿನೊಂದಿಗೆ ದರೋಡೆ ನಡೆಸಲು ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಖಾಡಕ್ಕಿಳಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಲು ಇಟ್ಟುಕೊಂಡಿದ್ದ ವಸ್ತುಗಳು ಜೊತೆಗೆ 912 ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button