Follow Us On

WhatsApp Group
Important
Trending

ವೇಶ್ಯಾವಾಟಿಕೆ ಆರೋಪ: ಮುರ್ಡೇಶ್ವರದಲ್ಲಿ ಹೊಟೇಲ್ ಮೇಲೆ ದಾಳಿ: ನಾಲ್ವರು ವಶಕ್ಕೆ

ಮುರುಡೇಶ್ವರ: ವಿಶ್ವಪ್ರಸಿದ್ಧ ಪ್ರವಾಸಿತಾಣವಾದ ಮುರ್ಡೇಶ್ವರಕ್ಕೆ ದೇಶ, ವಿದೇಶದ ಪ್ರವಾಸಿಗರು ಬರುತ್ತಿದ್ದು, ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮತ್ತು ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ. ಘಟನೆ ವೇಳೆ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

BEML Recruitment 2024: ಉದ್ಯೋಗಾವಕಾಶ: ಐಟಿಐ, ಡಿಪ್ಲೋಮಾ & ಪದವಿ ಪಾಸಾದವರು ಅರ್ಜಿ ಸಲ್ಲಿಸಬಹು

ಬಸ್ತಿಮಕ್ಕಿಯ ಹೈ ಲೆಂಡ್ ಹೋಟೆಲ್‌ನಲ್ಲಿ ನಡೆದ ದಾಳಿಯಲ್ಲಿ ನಡೆದಿದೆ. ಈ ವೇಳೆ ಇಬ್ಬರು ಯುವತಿಯರು ಹೊಟೇಲ್ ನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೋಟೆಲ್ ಸಿಬ್ಬಂದಿ ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ಮರೆಗೆ ಕಾರವಾರ ಸಿಇಎನ್ ವಿಭಾಗದ ಡಿವೈಎಸ್ಪಿ ಅಶ್ವಿನಿ ನೇತೃತ್ವದಲ್ಲಿ ದಾಳಿ ನಡೆದಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Back to top button