Anganwadi Recruitment: 1476 ಹುದ್ದೆಗಳಿಗೆ ನೇಮಕಾತಿ: SSLC ಆದವರು ಅರ್ಜಿ ಸಲ್ಲಿಸಿ
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ
Anganwadi Recruitment: ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1476 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: ಉದ್ಯೋಗಾವಕಾಶದ ಕುರಿತು ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ( Anganwadi Recruitment) ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ ನಿಗದಿಯಾಗಿದೆ.
ಇಲಾಖೆ | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ |
ಹುದ್ದೆಗಳು | ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು |
ಒಟ್ಟು ಹುದ್ದೆಗಳು | 1476 |
ಅರ್ಜಿ ಸಲ್ಲಿಸುವ ವಿಧಾನ | Online |
ವಿದ್ಯಾರ್ಹತೆ | SSLC |
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಉಡುಪಿ 193, ದಕ್ಷಿಣ ಕನ್ನಡ 335, ರಾಯಚೂರು 391 , ರಾಮನಗರ 216, ಮಂಡ್ಯದಲ್ಲಿ 341 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ನಿಗದಿಯಾಗಿದೆ. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆ ಮಾರ್ಗದರ್ಶಿ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೆಲ ಜಿಲ್ಲೆಗಳಿಗೆ ಸೆಪ್ಟೆಂಬರ್ 20, 29 ಮತ್ತು 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್