Anganwadi Recruitment: 1476 ಹುದ್ದೆಗಳಿಗೆ ನೇಮಕಾತಿ: SSLC ಆದವರು ಅರ್ಜಿ ಸಲ್ಲಿಸಿ

ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ

Anganwadi Recruitment: ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1476 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ: ಉದ್ಯೋಗಾವಕಾಶದ ಕುರಿತು ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ( Anganwadi Recruitment) ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ ನಿಗದಿಯಾಗಿದೆ.

ಇಲಾಖೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಗಳುಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು1476
ಅರ್ಜಿ ಸಲ್ಲಿಸುವ ವಿಧಾನOnline
ವಿದ್ಯಾರ್ಹತೆSSLC

ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಉಡುಪಿ 193, ದಕ್ಷಿಣ ಕನ್ನಡ 335, ರಾಯಚೂರು 391 , ರಾಮನಗರ 216, ಮಂಡ್ಯದಲ್ಲಿ 341 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ನಿಗದಿಯಾಗಿದೆ. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಮಾರ್ಗದರ್ಶಿಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೆಲ ಜಿಲ್ಲೆಗಳಿಗೆ ಸೆಪ್ಟೆಂಬರ್ 20, 29 ಮತ್ತು 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version