Follow Us On

WhatsApp Group
Important
Trending

ಗಣೇಶ ಹಬ್ಬಕ್ಕೆ ಖರ್ಚು ಮಾಡಿದ ಹಣದ ವಿಷಯಕ್ಕೆ ಸಹೋದರರ ಗಲಾಟೆ: ಕೊಲೆಯಲ್ಲಿ ಅಂತ್ಯ

ಕಾರವಾರ : ಗಣೇಶ ಚತುರ್ಥಿಯ ಆಚರಣೆ ವೇಳೆ ಹಬ್ಬಕ್ಕೆ ಖರ್ಚು ಮಾಡಿದ ಹಣದ ಲೆಕ್ಕದ ವಿಷಯಕ್ಕೆ ಸಹೋದರರ ನಡುವೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ನಡೆದಿದೆ. ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದ್ದು, ಈ ವೇಳೆ ಹಣದ ಲೆಕ್ಕದ ವಿವರ ಕೊಡಲಿಲ್ಲವೆಂದು ಗಲಾಟೆ ಆರಂಭವಾಗಿದೆ. ಕೊನೆಗೆ ಪ್ರಭಾಕರ್ ಅವರ ಸಹೋದರಿಯ ಮಕ್ಕಳು ಸಂದೇಶ ಎಂಬುವವನಿಗೆ ಚಾಕುವಿನಿಂದ ಇರಿದಿದ್ದು, ಗಲಾಟೆ ಸಾವಿನಲ್ಲಿ ಅಂತ್ಯಕoಡಿದೆ.

ಇದನ್ನೂ ಓದಿ: ಇಲ್ಲಿದೆ ಬೃಹತ್ ಉದ್ಯೋಗಾವಕಾಶ: 1476 ಹುದ್ದೆಗಳಿಗೆ ನೇಮಕಾತಿ: SSLC ಆದವರು ಅರ್ಜಿ ಸಲ್ಲಿಸಿ

ನಗರದ ಸಾಯಿಕಟ್ಟಾದ ಬಿಂದು ಮಾಧವ ದೇವಸ್ಥಾನದ ಬಳಿ ದುರ್ಘಟನೆ ನಡೆದಿದ್ದು, ಸಂದೇಶ ಪ್ರಭಾಕರ ಬೋರ್ಕರ್ ಕೊಲೆಯಾದ ದುರ್ದೈವಿ. ಸಂದೇಶ್‌ನ ಚಿಕ್ಕಪ್ಪನ ಮಗ ಮನೀಶ್ ಬೋರ್ಕರ್ ಚಾಕು ಇರಿದ ವ್ಯಕ್ತಿ ಎಂದು ತಿಳಿದುಬಂದಿದೆ. ಬೋರ್ಕರ್ ಕುಟುಂಬಸ್ಥರು ಪ್ರತಿವರ್ಷ ಗಣೇಶ ಚತುರ್ಥಿಯಂದು ಮನೆಯಲ್ಲಿ ಗಣಪತಿ ಮೂರ್ತಿ ಸ್ಥಾಪಿಸಿ ಪೂಜೆ ಸಲ್ಲಿಸಿಸುತ್ತಿದ್ದರು.

ಸಂಪ್ರದಾಯದoತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಗಣಪತಿ ಪೂಜೆ ನಂತರ ಪ್ರಭಾಕರ್ ಹಾಗೂ ಮನೋಹರ್ ಬೋರ್ಕರ್ ನಡುವೆ ಕಳೆದ ವರ್ಷ ಹಬ್ಬಕ್ಕೆ ಖರ್ಚು ಮಾಡಿದ ಹಣದ ಲೆಕ್ಕಾಚಾರದ ಕುರಿತು ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡೂ ಕುಟುಂಬಸ್ಥರ ಮಕ್ಕಳು ಹೊಡೆದಾಡಿಕೊಂಡಿದ್ದು, ಈ ವೇಳೆ ಪ್ರಭಾಕರ್ ಹಿರಿಯ ಮಗ ಸಂದೇಶ್‌ಗೆ ಮನೋಹರ್ ಅವರ ಕಿರಿಯ ಪುತ್ರ ಚಾಕು ಇರಿದಿದ್ದಾನೆ.

ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಚಾಕು ಇರಿದ ಮನೀಶ್ ಹಾಗೂ ಆತನಿಗೆ ಸಹಕಾರ ನೀಡಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button