BIS Recruitment: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಒಟ್ಟು 345 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿ ಅಧಿಸೂಚನೆಯಲ್ಲಿ ನೀಡಿದ ಮಾಹಿತಿಯಂತೆ 10ನೇ ತರಗತಿ ಮತ್ತು ಡಿಪ್ಲೋಮಾ, ಪದವಿ ಹಾಗು ಸ್ನಾತಕೋತ್ತರ ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Konkan Railway Recruitment: ಕೊಂಕಣ ರೈಲ್ವೆ ನೇಮಕಾತಿ: ಡಿಪ್ಲೋಮಾ, ಐಟಿಐ ಆದವರು ಅರ್ಜಿ ಸಲ್ಲಿಸಿ: 45 ಸಾವಿರ ವೇತನ
BIS Recruitment: ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ 1 ಲಕ್ಷದ ವರೆಗೂ ಇರಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಸೆಪ್ಟೆಂಬರ್ 30, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ವೈಯಕ್ತಿಕ ಸಹಾಯಕ, ಸಹಾಯಕ ವಿಭಾಗ ಅಧಿಕಾರಿ, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ತಾಂತ್ರಿಕ ಸಹಾಯಕ ಹೀಗೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಇಲಾಖೆ | ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ |
ಒಟ್ಟು ಹುದ್ದೆಗಳು | 345 |
ವಿದ್ಯಾರ್ಹತೆ | SSLC, ಡಿಪ್ಲೋಮಾ, ಪದವಿ ಹಾಗು ಸ್ನಾತಕೋತ್ತರ ಪದವಿ |
ಅರ್ಜಿ ಸಲ್ಲಿಕೆಗೆ ಕೊನೆಯ ದಿನ | ಸೆಪ್ಟೆಂಬರ್ 30, 2024 |
ಅಧಿಸೂಚನೆಯಲ್ಲಿ ನೀಡಿದ ಮಾಹಿತಿ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು , ಎಸ್‌ಇ , ಎಸ್‌ಟ ಅಭ್ಯರ್ಥಿಗಳಿಗೆ 5 ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಅರ್ಜಿ ಸಲ್ಲಿಕೆ ವಿಧಾನ | Online |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಪರೀಕ್ಷೆ, ಪ್ರಾಯೋಗಿಕ ಕೌಶಲ್ಯ ಪರೀಕ್ಷೆ ಹಾಗು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್