Follow Us On

WhatsApp Group
Important
Trending

KSRTC ಬಸ್ ಡಿಕ್ಕಿ: ಆಸ್ಪತ್ರೆಗೆ ಬರುತ್ತಿದ್ದ ಕಾರಿನಲ್ಲಿದ್ದ ಗಂಡ ಸಾವು, ಹೆಂಡತಿ ಗಂಭೀರ

ಶಿರಸಿ: ಆಸ್ಪತ್ರೆಗೆ ಬರುತ್ತಿದ್ದ ದಂಪತಿ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಹೊಡೆದು, ಓರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಕಾನಗೋಡ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಓರ್ವ ಮೃತಪಟ್ಟಿದ್ದು, ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಸಿದ್ದಾಪುರ ಕೊಂಡ್ಲಿ ಮೂಲದ ಚಂದ್ರಶೇಖರ ಪಲ್ಲೇದ (55) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಉದ್ಯೋಗಾವಕಾಶ: 1 ಲಕ್ಷದ ವರೆಗೆ ವೇತನ: SSLC, ಡಿಪ್ಲೋಮಾ, ಪದವಿ ಆದವರು ಅರ್ಜಿ ಸಲ್ಲಿಸಿ

ಈ ಘಟನೆಯಲ್ಲಿ ಮೃತನ ಪತ್ನಿ ಸುಜಾತ ಪಲ್ಲೇದ್ ಗಂಭೀರವಾಗಿ ಗಾಯಗೊಂಡಿಗೊoಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಚಿಕಿತ್ಸೆಗಾಗಿ ಶಿರಸಿ ಆಸ್ಪತ್ರೆಗೆ ಬರುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button