Follow Us On

WhatsApp Group
Big News
Trending

ಅನಂತ್‌ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!

ಕಾರವಾರ: ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದರಾದ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ತಪ್ಪಿಸಿ ವಿಶ್ವೇಶ್ವರ ಹೆಗಡೆ ಅವರಿಗೆ ಟಿಕೆಟ್ ಕೊಡಿಸಿದ್ದು ನಾನೇ ಎನ್ನುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದೂ ಆಗಿದೆ. ಈಗ ಇವರ ಹೇಳಿಕೆ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment

ಅಮೆರಿಕದಲ್ಲಿ ಮೀಸಲಾತಿ ಕುರಿತು ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದರು, ಕೇಂದ್ರ ಮಂತ್ರಿ ಇದ್ದಾಗಲೇ ಪ್ರಧಾನಿ ಮೋದಿ ಅವರು ಅನಂತಕುಮಾರ ಹೆಗಡೆ ಅವರನ್ನು ಪಾರ್ಲಿಮೆಂಟಿಗೆ ಕರೆಸಿ ದೇಶದ ಜನರ ಕ್ಷಮೆ ಕೇಳುವಂತೆ ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button