Follow Us On

WhatsApp Group
Job News
Trending

ಉದ್ಯೋಗ: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ

ಉದ್ಯೋಗ: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ( new india assurance recruitment ) ಒಟ್ಟು 325 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಪದವಿ ಪೂರೈಸಿದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಪ್ರೆಂಟಿಸ್ ಹುದ್ದೆಗಳ ಆರಂಭಿಕ ಮಾಸಿಕ ವೇತನ 9 ಸಾವಿರ ರೂಪಾಯಿ ಇರಲಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment

ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಗರಿಷ್ಠ ವಯಸ್ಸು 16-09-2024 ರಂತೆ 30 ವರ್ಷ ನಿಗದಿ ಪಡಿಸಲಾಗಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಕೆ ದಿನಾಂಕಸೆಪ್ಟೆಂಬರ್ 21, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಅಕ್ಟೋಬರ್ 5, 2024

( new india assurance recruitment) ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 5, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ , ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಇನ್ನು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 800 ರೂಪಾಯಿ, ಎಸ್‌ಸಿ, ಎಸ್‌ಟಿ ಹಾಗು ಮಹಿಳಾ ಅಭ್ಯರ್ಥಿಗಳಿಗೆ 600 ರೂಪಾಯಿ , PWD ಅಭ್ಯರ್ಥಿಗಳಿಗೆ 400 ರೂಪಾಯಿ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಕಂಪೆನಿನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು325
ವಿದ್ಯಾರ್ಹತೆಪದವಿ
ಹುದ್ದೆಯ ಹೆಸರುಅಪ್ರೆಂಟಿಸ್

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, 21-09-2024 ರಿಂದ 05-10-2024 ರವರೆಗೆ ಆನ್‌ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಕೃತ ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗ & ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button