ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶ

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಭಟ್ಕಳ ತಾಲೂಕಿನ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶ ಕಾರ್ಯಕ್ರಮವು ತಾಲೂಕಿನ ನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಜರುಗಿತು.

ಮನೆಗೆ ಬಂದು ಬೆಲ್ ಮಾಡಿದ ಅಪರಿಚಿತರು: ಶ್ರೀಮಂತ ಉದ್ಯಮಿ ಕೊಲೆ

ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಶೆಟ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸ್ಥಳೀಯ ಒಕ್ಕೂಟದ ಅಧ್ಯಕ್ಷರಾದ ಉಷಾ ಫೈ ಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಸ್ಕರ್ ನಾಯ್ಕ ಸತ್ಯಸಾಯಿ ಸಮಿತಿ ಇವರು ಸಭೆಯಲ್ಲಿ ಉಪಸ್ಥಿತರಿದ್ದು, ಯೋಜನೆ ಸಮಾಜಮುಖಿ ಕಾರ್ಯದ ಬಗ್ಗೆ, ಪೂಜ್ಯರು ಸಮಾಜದ ಅಭಿವೃದ್ಧಿ ಗಾಗಿ ಯೋಜನೆಯ ಮೂಲಕ ಜಾರಿಗೆ ತಂದಿರುವ ವಿವಿಧ ಯೋಜನೆಗಳ ವಿವರಿಸಿ, ಅವರ ಸಮಾಜಮುಖಿ ಕಾರ್ಯಕ್ಕೆ ನಾವು ಕ್ರತಜ್ಞತೆ ಸಲ್ಲಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ SBI Bank ನ ಡೆಪ್ಯುಟಿ ಮ್ಯಾನೇಜರ್ ಮಲ್ಲಿಕಾರ್ಜುನ್ ರವರು ಮಾತನಾಡಿ, ಯೋಜನೆ ಮತ್ತು ಬ್ಯಾಂಕ್ ನಡುವಿನ ಒಪ್ಪಂದದ ಬಗ್ಗೆ MOU ಪ್ರಕಾರ ಯಾವ ರೀತಿ ಕೆಲಸ ಮಾಡುತ್ತಿದೆ, DP ಹೆಚ್ಚಳ ಯಾವ ರೀತಿ ಆಗುತ್ತದೆ ಎಂದು ಮಾಹಿತಿ ನೀಡಿದರು.

ನಂತರ ಮಾನ್ಯ ಜಿಲ್ಲಾ ನಿರ್ದೇಶಕರಾದ ಮಹೇಶ ಎಂ.ಡಿ ಯವರು ಸ್ವ ಸಹಾಯ ಸಂಘಗಳ ಬಲವರ್ಧನೆ ಶಿಸ್ತು ಬದ್ಧ ವ್ಯವಹಾರ ಬಡ್ಡಿ ದರ, PRK ‌ಬಗ್ಗೆ, ಮಾಸಿಕ ವರದಿ ಮರುಪಾವತಿ ಚೀಟಿ ಬಗ್ಗೆ, ಲಾಭಾಂಶ ಹಂಚಿಕೆ, ವಾರದ ಕಂತಿನ ಪ್ರಯೋಜನ, ಸಮುದಾಯ ಕಾರ್ಯಕ್ರಮ ಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಯೋಜನಾಧಿಕಾರಿ ಗಣೇಶ ನಾಯ್ಕ ತಾಲೂಕಿನಲ್ಲಿ ಯೋಜನೆ ಮೂಲಕ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಪೂಜ್ಯರು ಮಂಜೂರು ಮಾಡಿರುವ ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯೋಜನೆಯು ಬೆಳೆದು ಬಂದ ಹಾದಿಯ ಕಿರು ಚಿತ್ರ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಧರ ನಾಯ್ಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 67 ಒಕ್ಕೂಟದ ಪದಾಧಿಕಾರಿಗಳು , ದಾಖಲಾತಿ ಸಮಿತಿ ಸದಸ್ಯರು ಸೇವಾ ಪ್ರತಿನಿಧಿಗಳು ಮೇಲ್ವಿಚಾರಕರ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Exit mobile version