Big News
Trending

Muda Scam: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್

Muda Scam: ದೇಶಾದ್ಯಂತ ಭಾರೀ ಚರ್ಚೆ ಹಾಗು ಕುತೂಹಲಕ್ಕೆ ಕಾರಣವಾಗಿರುವ ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯ ಇದೀಗ ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಪ್ರಕರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ತನ್ನ ತೀರ್ಪನ್ನು ನೀಡಿದೆ.

ಇದನ್ನೂ ಓದಿ: ಇಲ್ಲಿದೆ ಉದ್ಯೋಗಾವಕಾಶ: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ

Muda Scam:ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಸರಿಯಗಿಯೇ ಇದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಎತ್ತಿಹಿಡಿದ ಹೈಕೋರ್ಟ್. ಅಲ್ಲದೆ, ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಈ ತೀರ್ಪುನ್ನು ಪ್ರಕಟಿಸಿದೆ.

ತೀರ್ಪಿನ ಪ್ರಮುಖ ಅಂಶಗಳು

  • ಮುಖ್ಯಮoತ್ರಿ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದಾಗಿದೆ
  • ಸಂವಿಧಾನದ ವಿಧಿ ’17 ಎ’ ಅಡಿ ಅನುಮತಿ ಕೋರಿದ್ದು ಸರಿ
  • ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿ ಎಂದು ಹೇಳಿದೆ.
  • ಇಲ್ಲಿ ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ
  • ’17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ಸಿದ್ದರಾಮಯ್ಯ ಪರ ವಾದ ಮಂಡಿಸಿದ್ದರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ಜೊತೆಗೆ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಪರ ವಕೀಲರು ಸಹ ಈ ಕೇಸ್ ನಲ್ಲಿ ವಾದ ಮಂಡಿಸಿದ್ದರು.

ಏನಿದು ಮುಡಾ ಕೇಸ್? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬoಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಆರೋಪಗಳು ಕೇಳಿಬಂದಿತ್ತು. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು.

ಈ ಜಾಗವನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಈ ಜಾಗ ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಆದರೆ, ಇದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದೆ. ಇದು ಈಗ ಚರ್ಚೆಗೆ ಕಾರಣವಾಗಿತ್ತು. ಮುಡಾ ಪ್ರಕರಣದ ಬೆನ್ನಲ್ಲೆ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದರು.

ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿಯನ್ನು ಮಾಡಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಈ ಪ್ರಕರಣದ ಪ್ರಮುಖರ ಮತ್ತು ಗಂಭೀರ ಆರೋಪ.

ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಲ್ಲದೆ, ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38 ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬ ಆರ್‌ಟಿಐ ಕಾರ್ಯಕರ್ತರ ಆರೋಪ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button