ನೇಮಕಾತಿ: rrb recruitment 2024: ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 3445 ನಾನ್ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 12ನೇ ತರಗತಿ ಪಾಸಾದವರು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಆರಂಭಿಕ ವೇತನ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 21 ಸಾವಿರದ ವರೆಗೆ ಇರಲಿದೆ.
ಇದನ್ನೂ ಓದಿ: ಉದ್ಯೋಗ: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ: ಪದವಿ ಆದವರು ಅರ್ಜಿ ಸಲ್ಲಿಸಿ
ನೇಮಕಾತಿ: rrb recruitment 2024: ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, 20 ಅಕ್ಟೋಬರ್ 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ ಹಾಗು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಹಾಗು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಗದಿಯಾಗಿದೆ. ಎಸ್ಸಿ – ಎಸ್ಟಿ, ಮಾಜಿ ಸೈನಿಕ, ಮಹಿಳಾ, ಪಿಡಬ್ಲ್ಯೂಡಿ, ಮಂಗಳಮುಖಿ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ 250 ರೂಪಾಯಿ ಶುಲ್ಕ ಮತ್ತು ಉಳಿದ ಅಭ್ಯರ್ಥಿಗಳಿಗೆ – 500 ರೂಪಾಯಿ ಶುಲ್ಕ ಇದೆ. ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿoಗ್, ಯುಪಿಐ ಮೂಲಕ ಶುಲ್ಕ ಪಾವತಿಸುವ ವ್ಯವಸ್ಥೆ ಇದೆ.
ಇಲಾಖೆ | ಭಾರತೀಯ ರೈಲ್ವೆ ಇಲಾಖೆ |
ಒಟ್ಟು ಹುದ್ದೆಗಳು | 3445 |
ಅರ್ಜಿ ಸಲ್ಲಿಸುವ ವಿಧಾನ | Online |
ಶೈಕ್ಷಣಿಕ ಅರ್ಹತೆ | 12ನೇ ತರಗತಿ ಪಾಸಾದವರು & ತತ್ಸಮಾನ ಶೈಕ್ಷಣಿಕ ಅರ್ಹತೆ |
ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಹಂತದಲ್ಲಿ ನಡೆಯಲಿದೆ. 21 ಸೆಪ್ಟೆಂಬರ್ 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಆರಂಭ | 21 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನ | 20 ಅಕ್ಟೋಬರ್ 2024 |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್