ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಕಾರವಾರ: ಕಾರವಾರ ತಾಲೂಕಿನ ಮುದಗಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರು ಕಾರವಾರ ಕಡೆಯಿಂದ ಅಂಕೋಲಾ ಕಡೆ ತೆರಳುತಿತ್ತು. ಟ್ಯಾಂಕರ್ ವಾಹನ ಅಂಕೋಲಾ ಕಡೆಯಿಂದ ಕಾರವಾರ ಕಡೆ ಸಂಚರಿಸುತಿತ್ತು.

ಕೆಲಸಕ್ಕೆ ಹೋದ ಯುವತಿ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಕಾರಿನಲ್ಲಿ ಎರಡು ಕುಟುಂಬದ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತ ನಡೆದಾಕ್ಷಣ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿoದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version