ಹೊನ್ನಾವರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ರವರ ಅನುಮೋದನೆ ಮೇರೆಗೆ, ಹೊನ್ನಾವರದ ಹಿರಿಯ ಕಾಂಗ್ರೆಸ್ ಮುಖಂಡ ಬಾಲಚಂದ್ರ ಮಾದೇವ ನಾಯ್ಕ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧುಬಂಗಾರಪ್ಪರವರು ನೀಡಿದ ಆದೇಶ ಪತ್ರದಲ್ಲಿ ಈ ಕುರಿತು ತಿಳಿಸಿದ್ದಾರೆ. ಪಕ್ಷದ ಹಾಗೂ ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.
ಬಾಲಚಂದ್ರ ನಾಯ್ಕರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿದವರು. ಈ ಹಿಂದೆ ತಾಲೂಕಾ ಯುತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುತ್ ಕಾಂಗ್ರೆಸ್ಉಪಾಧ್ಯಕ್ಷರಾಗಿ, ಹಾಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇವರ ಪತ್ನಿ ರಾಜಶ್ರೀ ಬಾಲಚಂದ್ರ ನಾಯ್ಕ ಅವರು ಹೊನ್ನಾವರ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷರಾಗಿದ್ದಾರೆ.ಬಿ.ಎ ಪದವಿಧರರಾಗಿರುವ ಬಾಲಚಂದ್ರ ನಾಯ್ಕರು ರಾಜಕೀಯವಾಗಿ ಮಾತ್ರವಲ್ಲದೆ ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿಯು ತೊಡಗಿಕೊಂಡಿದ್ದಾರೆ.ಪಟ್ಟಣದ ಪ್ರತಿಷ್ಟಿತ ಎಸ್ ಡಿ ಎಮ್ ಕಾಲೇಜಿನ ನಿರ್ದೇಶಕರಾಗಿ,ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿಯು ಸೇವೆ ಸಲ್ಲಿಸಿದ್ದಾರೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್ , ಹೊನ್ನಾವರ