
ರಾಜ್ಯದ ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿರುವ ಹವಾಮಾನ ಇಲಾಖೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳೂ ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್