Follow Us On

WhatsApp Group
Important
Trending

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಕೈ ಹಿಡಿದು ಎಳೆದಾಡಿದ ಯುವಕ

ಶಿರಸಿ: ಯುವತಿಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಆಗಮಿಸಿದ ಅಪರಿಚಿತ ವ್ಯಕ್ತಿ ಯುವತಿ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಯುವತಿ ಕೂಗಾಡಿದ್ದಾಳೆ. ಕೂಗಾಟ ಕೇಳಿ ಅಲ್ಲಿಯ ಗ್ರಾಮಸ್ಥರು ಸ್ಥಳಕ್ಕೆ ಓಡಿ ಬರುತ್ತಿರುವದನ್ನು ಕಂಡು ಯುವಕ ಸ್ಥಳದಿಂದ ಬೈಕ್ ಬಿಟ್ಟುಕೊಂಡು ಪರಾರಿಯಾಗಿದ್ದಾನೆ.

20 ಕ್ವಿಂಟಲ್ ಅಡಿಕೆ ಕಳ್ಳತನ: ಆರೋಪಿಯ ಬಂಧನ

ಶಿರಸಿ ತಾಲೂಕಿನ ಬಿಸಲಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಆಂಗೋಡ ಕೊಪ್ಪದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಬೈಕ್ ಬಿಟ್ಟು ಓಡಿ ಹೋಗಿದ್ದ ಹಾವೇರಿ ಮೂಲದ ಆರೋಪಿಯನ್ನು ಗ್ರಾಮಸ್ಥರೇ ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ಆರೋಪಿ ಗಾವಡಿ ಕೆಲಸಕ್ಕೆಂದು ಬಾಳೆಕೊಪ್ಪಕ್ಕೆ ಬಂದ ಸಂದರ್ಭದಲ್ಲಿ ಈ ಕೃತ್ಯ ಎಸಗಿ ಓಡಿ ಹೋಗಿದ್ದ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button