ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ನಾಯಿ, ಬೆಕ್ಕುಗಳಿಗೂ ರೇಬೀಸ್ ರೋಗದ ಲಸಿಕೆ

ಕಾರವಾರ: ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು ಮೂವವರೆ ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 4-5 ತಿಂಗಳ ಮೇಲ್ಪಟ್ಟ ಎಲ್ಲಾ ದನ ಮತ್ತು ಎಮ್ಮೆಗಳಿಗೆ ಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ಪ್ರತಿ ಒಂದು ತಿಂಗಳುಗಳಿಗೊಮ್ಮೆ ಹಾಕಲಾಗುತ್ತದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಕೈ ಹಿಡಿದು ಎಳೆದಾಡಿದ ಯುವಕ

ರೈತರ ಮನೆ ಬಾಗಿಲಿಗೆ ಬಂದು ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಹಾಕಲಾಗುವುದು. ಪ್ರತಿ 50 ರಿಂದ 80 ಜಾನುವಾರುಗಳಿಗೆ ಒಂದು ಬ್ಲಾಕ್‌ನಂತೆ ಒಟ್ಟು ಜಿಲ್ಲೆಯಲ್ಲಿ 5,138 ಬ್ಲಾಕ್‌ಗಳನ್ನು ರಚಿಸಲಾಗಿದೆ. 235 ಲಸಿಕೆದಾರರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ಸೂಜಿಯನ್ನು ಬಳಸಲಾಗುತ್ತದೆ.

ಸದರಿ ಕಾರ್ಯಕ್ರಮದ ಜೊತೆಗೆ ರೈತರ ಮನೆಯಲ್ಲಿರುವ ನಾಯಿ ಹಾಗೂ ಬೆಕ್ಕುಗಳಿಗೆ ರೇಬೀಸ್ ರೋಗದ ಲಸಿಕೆಯನ್ನು ಉಚಿತವಾಗಿ ಹಾಕಲಾಗುವುದು. ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಹಾಗೂ ನಾಯಿ/ಬೆಕ್ಕುಗಳಿಗೆ ರೇಬೀಸ್ ರೋಗದ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್…

Exit mobile version