ಕಾರವಾರ: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಮೂಲಕ, ಜಿಲ್ಲೆಯಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ,ಸಮಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿದ ಯುವಕರು
ಪ್ರಸ್ತುತ ಜಿಲ್ಲೆಯಲ್ಲಿ ಕಾಯ್ದೆಯಡಿ ನೋಂದಣಿಯಾಗಿ ಕಾರ್ಯ ನಿರ್ವಹಿಸುತ್ತಿರುವ 71 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯರು ತಪಾಸಣೆ ನಡೆಸಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕಾನೂನು ರೀತಿಯಲ್ಲಿ ನಿರ್ವಹಿಸಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ, ದಾಖಲಾತಿಗಳನ್ನು ಸಮ ರ್ಪಕವಾಗಿ ನಿರ್ವಹಿಸುತ್ತಿರುವ ಬಗ್ಗೆ, ಸಮಗ್ರ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.
ವಿಸ್ಮಯ ನ್ಯೂಸ್, ಕಾರವಾರ