ದನಗಳ್ಳತನ ಪ್ರಕರಣ: ಆರೋಪಿ ಬಂಧಿಸಿದ ಪೊಲೀಸರು

ಕುಮಟಾ: ತಾಲೂಕಿನ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ದನಗಳನ್ನು ವಾಹನಗಳ ಮೂಲಕ ಕಳ್ಳಸಾಗಾಣಿಕೆ ಮಾಡುತ್ತಿದ್ದ ತಂಡವನ್ನು ಕುಮಟಾ ಠಾಣೆಯ ಪೋಲೀಸರು ಕಾರ್ಯಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇತ್ತಿಚೆ ಕುಮಟಾ ತಾಲೂಕಿನ ಹೆಗಡೆ ಗ್ರಾಮದ ಶ್ರೀ ಶಾಂತಿಕಾoಬಾ ದೇವಸ್ಥಾನದ ಬಳಿ ಮಲಗಿದ್ದ 2 ಎತ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಕುಮಟಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕುಮಟಾ ಪೋಲೀಸ್ ಠಾಣಾ ಪಿ.ಎಸ್.ಐ ಸಾವಿತ್ರಿ ನಾಯಕ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿದ ಯುವಕರು

ಇಂದು ಬೆಳಗಿನ ಜಾವ ದನಗಳ್ಳತನದ ಆರೋಪಿಯಾಗಿರುವ ಭಟ್ಕಳ ತಾಲೂಕಿನ ಮುರ್ಡೇಶ್ವರ ನಿವಾಸಿಯಾಗಿರುವ ನೂರುಲ್ ಹಸನ್ ಅಬು ಮೊಹಮ್ಮದ್ ಗೈಮಾ ಎಂಬಾತನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಸ್ಕಾರ್ಪಿಯೋ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ದನಗಳ್ಳತನದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದು ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ. ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಭಾಗಿಯಾದ ಕುಮಟಾ ಠಾಣೆಯ ಪೋಲೀಸರಿಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಮ್. ನಾರಾಯಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕುಮಟಾದ ಜನತೆ ದನಗಳ್ಳರನ್ನು ಹಿಡಿದ ಪೋಲೀಸರ ಕಾರ್ಯಕ್ಕೆ ಅಭಿನಂಧಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version