ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲು ನಕಾರ: ಅಪ್ಸಾ ಹುಜೈಪಾ ವಿರುದ್ಧ ಆಕ್ರೋಶ

ಭಟ್ಕಳ: ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಸಭಾ ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿದ ಘಟನೆ ನಡೆದಿದೆ. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಸಹಾಯಕ ಆಯುಕ್ತೆ ಡಾ‌ ನಯನಾ . ಎನ್ ಧ್ವಜಾರೋಹಣ ನೆರವೇರಿಸಿದರು.

ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗರ ರಕ್ಷಣೆ

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ವೇದಿಕೆ ಮೇಲಿದ್ದ ಭುವನೇಶ್ವರಿ ದೇವಿಯ ಫೋಟೋ ಗೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ಪುಷ್ಪ ನಮನ ಸಲ್ಲಿಸಲು ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಖಾಜಿಯಾ ಅಪ್ಸಾ ಹುಜೈಪಾರನ್ನು ಕೇಳಿಕೊಂಡಾಗ ಅವರು ಪುಷ್ಪ ನಮನ ಸಲ್ಲಿಸಲು ನಿರಾಕರಿಸಿದರು. ಆನಂತರ ಸಹಾಯಕ ಆಯುಕ್ತೆ ಡಾ.ನಯನ ಕೂಡ ಪುಷ್ಪ ನಮನ ಸಲ್ಲಿಸುವಂತೆ ಸೂಚಿಸಿದರು ಇದಕ್ಕೂ ಕೂಡ ಅವರು ನಿರಾಕರಣೆ ಮಾಡಿದರು. ಇದೀಗ ಅವರು ಕನ್ನಡಾಂಬೆಗೆ ಅಗೌರವ ತೋರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ಷೇಪ‌ ವ್ಯಕ್ತವಾಗುತ್ತಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Exit mobile version