ಕುಮಟಾ: ಪಟ್ಟಣ ವ್ಯಾಪ್ತಿಯಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಾತ್ರಿ 9 ಗಂಟೆ ಸುಮಾರಿಗೆ ರಾಮಲೀಲಾ ಆಸ್ಪತ್ರೆ ಎದುರು ಈ ದುರ್ಘಟನೆ ನಡೆದಿದೆ.
ಧಾರೇಶ್ವರದ ನಿವಾಸಿಯಾಗಿದ್ದು, ನಾಗು ಬಾಳ ಮುಕ್ರಿ(68) ಮೃತಪಟ್ಟಿರುವ ಪಾದಚಾರಿ ಎಂದು ತಿಳಿದುಬಂದಿದೆ. ಈತ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದಿವಗಿ ಕಡೆಯಿಂದ ಕುಮಟಾ ಕಡೆ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ನಾಗು ಮುಕ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕುಮಟಾ