ಕುಮಟಾ: ತಾಲೂಕಿನ ಬರ್ಗಿ ಗ್ರಾಮದ ಶ್ರೀ ಘಟಭೀರ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀಗ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗಿದ್ದ ಇನ್ವರ್ಟರ್ ಬ್ಯಾಟರಿ, ಕಾಣಿಕೆ ಹುಂಡಿ ಹಾಗೂ ಇನ್ನೂ ಅನೇಕ ವಸ್ತುಗಳನ್ನು ಕದ್ದಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ವಿಷಯತ ತಿಳಿಯುತ್ತಿದ್ದಂತೆ ಕಾರವಾರದಿಂದ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವಿಸ್ಮಯ ನ್ಯೂಸ್, ನಾಗೇಶ್ ದಿವಗಿ ಕುಮಟಾ