Important
Trending

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ವಿಧಿವಶ: ಹೊನ್ನಳ್ಳಿಯ ತುಳಸಿ ಇನ್ನು ನೆನಪು ಮಾತ್ರ

ಅಂಕೋಲಾ : ವೃಕ್ಷ ಮಾತೆ ಎಂದೇ ಗುರುತಿಸಿಕೊಂಡ ಪದ್ಮಶ್ರೀ ಪುರಸ್ಕೃತ ಹೊನ್ನಳ್ಳಿಯ ತುಳಸಿ ಗೌಡ (86 )ಡಿಸೆಂಬರ್ 16 ರ ಸೋಮವಾರ ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಹಾಸಿಗೆ ಹಿಡಿದಿದ್ದರು. ಹಾಲಕ್ಕಿ ಒಕ್ಕಲಿಗ, ಸಂಘದ ಜಿಲ್ಲಾಧ್ಯಕ್ಷ ಮತ್ತು ನಾಟಿ ವೈದ್ಯ ಹನುಮಂತ ಗೌಡ ಹೊನ್ನಳ್ಳಿಗೆ ಬೇಟಿ ನೀಡಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ತಮ್ಮ ಹಸಿರು ಪ್ರೇಮದ ಮೂಲಕ ದೇಶ ವಿದೇಶಗಳಲ್ಲಿ ಹೆಸರಾಗಿ ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ ,ಗೌರವ ಡಾಕ್ಟರೇಟ್ ಸೇರಿದಂತೆ ಸಾವಿರಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಮೃತರ ಅಂತ್ಯಕ್ರಿಯೆಯನ್ನು ಡಿಸೆಂಬರ್ 17 ರ ಮಂಗಳವಾರ ಹೊನ್ನಳ್ಳಿಯಲ್ಲಿ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ .

ಅವರು ಪದ್ಮಶ್ರೀ ಪುರಸ್ಕೃತರಾಗಿರುವುದರಿಂದ ಸಕಲ ಸರ್ಕಾರಿ ಗೌರವ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ಸಂಸ್ಕಾರ ನೆರವೇರಿಸಬೇಕಿದೆ . ತಾಲೂಕಿನ ಹಾಗೂ ನಾಡಿನ ಕೀರ್ತಿ ಹೆಚ್ಚಿಸಿದ್ದ ಪದ್ಮಶ್ರೀ ತುಳಸಿ ಗೌಡ ಅವರ ನಿಧನಕ್ಕೆ ಶಾಸಕ ಸತೀಶ ಸೈಲ್ , ಸಂಸದ ಕಾಗೇರಿ ,ಮಾಜಿ ಶಾಸಕಿ ರೂಪಾಲಿ ನಾಯ್ಕ , ಮಾಜಿ ಸಚಿವ ಆನಂದ ಅಸ್ನೋಟಿಕರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ .

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button