ಹೊನ್ನಾವರ: ಶರಾವತಿ ನದಿಯಲ್ಲಿ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಈ ಕುರಿತು ಕ್ರಮಕೈಗೊಳ್ಳಬೇಕೆಂದು ತಾಲೂಕು ಸಾಂಪ್ರದಾಯಿಕ ಮರಳು ಗುತ್ತಿಗೆದಾರರ ಸಂಘದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಬೆಳಗ್ಗಿನ ಜಾವ 6 ಗಂಟೆಯವರೆಗೆ ಸುಮಾರು 100ಕ್ಕೂ ಹೆಚ್ಚು ಟಿಪ್ಪರ್ ವಾಹನಗಳ ಮುಖಾಂತರ ನದಿಯಲ್ಲಿ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಈ ರಸ್ತೆ ಮಾರ್ಗಗಳಲ್ಲಿ ಫಾರೆಸ್ಟ್ ಚೆಕ್ ಪೋಸ್ಟ್ಗಳು ಹಾಗೂ ಪೊಲೀಸ್ ಚೆಕ್ ಪೋಸ್ಟ್ಗಳು ಇದ್ದರೂ ಕೂಡ ಹೇಗೆ ಮರಳು ಸಾಗಿಸಲಾಗುತ್ತಿದೆ ಎಂದು ತಿಳಿಯುತ್ತಿಲ್ಲ.
ಈ ದಂದೆ ರಾಜಾರೋಷವಾಗಿ ನಡೆಯುತ್ತಿದ್ದರು ಸಂಬAಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಹಶೀಲ್ದಾರ ಪ್ರವೀಣ ಕರಾಂಡೆ ಮನವಿಯಲ್ಲಿ ತಿಳಿಸಲಾಗಿದೆ. ಮರಳು ಗುತ್ತಿಗೆದಾರರ ಸಂಘದ ವಿನೋದ ನಾಯ್ಕ, ಶಿವಾನಂದ ಹೆಗಡೆ ಕಡತೋಕಾ, ಮಂಜುನಾಥ ಉಲ್ಲಾಸ ರಮಾಕಾಂತ ಮೇಸ್ತ ಶಾನಭಾಗ, ದಯಾನಂದ ಗೌಡ, ಜಾರ್ಜ್ ಡಯಾಸ್ ಹಾಗೂ ಎಸ್ ಜಿ ನಾಯ್ಕ ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ