
ಶಿರಸಿ: ಪೇಟೆಗೆ ಹೋಗಿ ಬರುವೆ ಎಂದು ಹೇಳಿ ಹೋಗಿದ್ದ 27 ವರ್ಷದ ಯುವತಿಯೊಬ್ಬಳು ಕಾಣೆಯಾದ ಬಗ್ಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೀಕ್ಷಾ ಜೇರಟಗಿ ಕಾಣೆಯಾದ ಯುವತಿಯಾಗಿದ್ದಾಳೆ. ಈಕೆ ಮನೆಯಿಂದ ಪೇಟೆಗೆ ಹೋಗಿ ಬರುವೆ ಎಂದು ಹೋದವಳು ಇದುವರೆಗೂ ಮರಳಿ ಬಂದಿಲ್ಲ. ಯುವತಿಯನ್ನು ಹುಡುಕಿಕೊಡುವಂತೆ ಯುವತಿಯ ತಂದೆ ಮಲ್ಲಿಕಾರ್ಜುನ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಬಲ್ಲವಳಾಗಿದ್ದಾಳೆ ಎಂದು ಹೇಳಲಾಗಿದೆ. ನಗರ ಠಾಣಾ ಪಿಎಸ್‌ಐ ನಾಗಪ್ಪ ಬಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್