ದಾಂಡೇಲಿ: ಲಾರಿಯೊಂದರ ಬ್ರೇಕ್ ಫೇಲ್ ಆಗಿ ಬಟ್ಟೆ ಅಂಗಡಿಗೆ ನುಗ್ಗಿದ ಘಟನೆ ದಾಂಡೇಲಿಯ ಸುಭಾಷ ನಗರದಲ್ಲಿ ನಡೆದಿದೆ. ಲಾರಿಯು ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಬಟ್ಟೆ ಅಂಗಡಿಗೆ ನುಗ್ಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಟ್ಟೆ ಅಂಗಡಿಗೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್, ದಾಂಡೇಲಿ