Focus News
Trending

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಜಪಾನ್ ತಜ್ಞರ ತಂಡ ಭೇಟಿ ನೀಡಿದ್ದು ಯಾಕೆ ನೋಡಿ?

ಅಂಕೋಲಾ: ಜಪಾನ್ ಒಟ್ಟು 7 ತಜ್ಞರ ತಂಡ ಜಿಲ್ಲೆಗೆ ಆಗಮಿಸಿ ಅಂಕೋಲಾದ ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ರಕ್ಷಣಾ ಗೋಡೆ ನಿರ್ಮಾಣ ಸಂಬoಧ ಪರಿಶೀಲನೆ ನಡೆಸಿದೆ. 2024 ಜೂನ್ 16 ರಂದು ನಡೆದ ಶಿರೂರು ಗುಡ್ಡ ಕುಸಿತದ ದುರಂತದ ನಂತರ ಭಾರತೀಯ ಭೂ ವಿಜ್ಞಾನ ಸಮೀಕ್ಷೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ನೀಡಿತ್ತು. ಆದರೆ ಶಿರೂರು ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾಗದoತೆ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಬಳಿಕ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗಿರುವ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತೆರಳಿ ಭೂ ತಜ್ಞರ ತಂಡ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದರು.

ಆದರೂ ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿರಲಿಲ್ಲ. ಆದರೆ ಇದೀಗ ಜಪಾನ್ ದೇಶದ ತಜ್ಞರ ತಂಡ ಎನ್ ಎಚ್ ಎಐ ಹಾಗೂ ಐಆರ್ ಬಿ ಅಧಿಕಾರಿಗಳ ಜೊತೆಗೂಡಿ ಜಿಲ್ಲೆಯ ಶಿರೂರ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಶಿರೂರು ಗುಡ್ಡ ಕುಸಿತದ ಪ್ರದೇಶದಲ್ಲಿ ಮಣ್ಣಿನ ಗುಣಮಟ್ಟ ಹೇಗಿದೆ ಮತ್ತೆ ಗುಡ್ಡ ಕುಸಿತ ಮರುಕಳಿಸದಂತೆ ತಡೆಯುವ ಬಗ್ಗೆ ಯಾವೆಲ್ಲ ರಕ್ಷಣಾ ಕ್ರಮ ಕೈಗೊಳ್ಳಬಹುದು ಎಂದು ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Back to top button