Important
Trending

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ದಾಂಡೇಲಿ: ಪ್ರವಾಸಕ್ಕೆಂದು ದಾಂಡೇಲಿಗೆ ಬರುತ್ತಿದ್ದ ಇನೋವಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಎಂಟು ಜನ ಗಾಯಗೊಂಡು, ಓರ್ವನಿಗೆ ಗಂಭೀರ ಗಾಯವಾದ ಘಟನೆ ತಾಲ್ಲೂಕಿನ ಹಳಿಯಾಳ ದಾಂಡೇಲಿ ರಸ್ತೆಯ ತಾಟಗೇರಾ ಕ್ರಾಸ್ ಹತ್ತಿರ ನಡೆದಿದೆ. ಗಾಯಗೊಂಡವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಗಂಭೀರ ಗಾಯಗೊಂಡಿದ್ದ ಹುಬ್ಬಳ್ಳಿಯ ನಿವಾಸಿ ಅನೂಪ್ ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಇವರೆಲ್ಲ ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬರುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್‌ಐ ಜಗದೀಶ್, ಎಎಸ್‌ಐ ವೆಂಕಟೇಶ ತೆಗ್ಗಿನ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ದಾಂಡೇಲಿ

Back to top button