Important
Trending

ಹೆಂಡತಿ ಮಕ್ಕಳೊಂದಿಗೆ ತವರಿಗೆ ಹೋದಾಗ ಬಾಡಿಗೆ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ.

ಅಂಕೋಲಾ : ಕೆ. ಎಲ್ ಇ ಸೊಸೈಟಿಯ ಅಂಗಸಂಸ್ಥೆಯಲ್ಲಿ ಕಳೆದ 8 ವರ್ಷಗಳಿಂದ ತಾಲೂಕಿನಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೋರ್ವ , ತಾನುಳಿದುಕೊಂಡಿದ್ದ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆ , ಮೂಡಲಗಿ ತಾಲೂಕು , ಕುಲಗೋಡ ಮೂಲದ ಬಸವರಾಜ ರಾಮಪ್ಪ ಬಾಗಿಮನಿ (35 ) ಎಂಬಾತನೇ ಆತ್ಮ ಹತ್ಯಗೆ ಶರಣಾದ ದುರ್ದೈವಿ.

ಕಳೆದ 3-4 ದಿನಗಳ ಹಿಂದೆ ಆತನ ಹೆಂಡತಿ ಮತ್ತು ಮಕ್ಕಳು ಊರಿಗೆ ಹೋಗಿದ್ದು , ತನ್ನ ಸೇವಾ ಕರ್ತವ್ಯದ ನಿಮಿತ್ತ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಿದ್ದ ಬಸವರಾಜ , ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅಂಕೋಲಾದ ಪುರಲಕ್ಕಿ ಬೇಣದಲ್ಲಿರುವ ತನ್ನ ಬಾಡಿಗೆ ಮನೆಯ ಎಲ್ಲಾ ಬಾಗಿಲನ್ನು ಲಾಕ್ ಮಾಡಿಕೊಂಡು , ಬೆಡ್ ರೂಮಿನಲ್ಲಿರುವ ಸಿಲಿಂಗ್ ಫ್ಯಾನ್ ಗೆ ಒಂದು ಸೀರೆಯಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು ಈ ಕುರಿತು , ಮೃತನ ಸಹೋದರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳ ಪರಿಶೀಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಮುಂದುವರೆಸಿದ್ದಾರೆ. ಪೊಲೀಸ್ ತನಿಖೆಯ ಬಳಿಕವಷ್ಟೇ ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬಹುದಾಗಿದೆ. ಆದರೂ ಶಿಕ್ಷಕ ವೃತ್ತಿಯಲ್ಲಿದ್ದು ಪಾಠ ಮಾಡಿ ಇತರರಿಗೆ ಮಾದರಿಯಾಗಬೇಕಾದವರು , ಏನೇ ಸಮಸ್ಯೆ ಇದ್ದರೂ ಆತ್ಮಹತ್ಯೆಯ ಹಾದಿ ತುಳಿದಿರುವುದು ಸರಿಯಲ್ಲ ಎನ್ನುವ ಮಾತು ಪ್ರಜ್ಞಾವಂತ ವಲಯದಿಂದ ಕೇಳಿ ಬಂದಂತಿದೆ. ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ನಾಯ್ಕ , ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕಾ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲು ಸಹಕರಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button