Important
Trending
ಕಾರವಾರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ: ಉತ್ತರ ಕನ್ನಡದಲ್ಲಿ ಬಿಸಿಲ ಜಳಕ್ಕೆ ಜನರು ಕಂಗಾಲು

ಕಾರವಾರ: ಉತ್ತರ ಕನ್ನಡದಲ್ಲಿ ಬಿಸಿಲ ಜಳಕ್ಕೆ ಜನರು ಕಂಗಾಲಾಗಿದ್ದಾರೆ. ಅಲ್ಲದೇ ರಾಜ್ಯದಲ್ಲಿಯೇ ಗರಿಷ್ಠ 41.3 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಾರವಾರದ ಸಾವಂತವಾಡದಲ್ಲಿ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಮಾಹಿತಿಯಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಹಾಗೂ ರಾಯಚೂರು ಜಿಲ್ಲೆಗಳ ಒಟ್ಟು 13 ಸ್ಥಳಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ.
Job Alert: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಇಂದೇ ಅರ್ಜಿ ಸಲ್ಲಿಸಿ
ಈ ಪೈಕಿ ಉತ್ತರಕನ್ನಡದ ಕರಾವಳಿಯಲ್ಲಿಯೇ 6 ಸ್ಥಳಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಇನ್ನು ಮುಂದಿನ ಐದು ದಿನಗಳವರೆಗೂ ಈ ಗರಿಷ್ಠ ತಾಪಮಾನ ಮುಂದುವರಿಯಲಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಉಡುಪಿಯಲ್ಲಿ 3 ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಇರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಎಚ್ಚರಿಕೆ ನೀಡಿದೆ.
ವಿಸ್ಮಯ ನ್ಯೂಸ್, ಕಾರವಾರ