Important
Trending

ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ: ಶಿರಸಿಯಲ್ಲಿ ಇಡ್ಲಿ ತಯಾರಿಸುತ್ತಿದ್ದ ಅಂಗಡಿಗಳ ಮೇಲೆ ದಾಳಿ

ಶಿರಸಿ: ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿದ್ದ ಅಂಗಡಿಗಳ ಮೇಲೆ ಬೆಳ್ಳಂಬೆಳಿಗ್ಗೆ ಶಿರಸಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿರಸಿ ಶಿವಾಜಿ ಚೌಕ್ ಬಳಿ ಇರುವ ಮಲ್ಲಿಕಾ ಹೊಟೆಲ್ ಪಕ್ಕದಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ಮಾಡುತ್ತಿರುವುದು ಕಂಡು ಬಂದಿದ್ದರಿoದ ಅಂಗಡಿ ಮಾಲಕನ ಮೇಲೆ ಕ್ರಮ ಜರುಗಿಸಲಾಗಿದೆ. ನಗರಸಭೆಯ ಪೌರಾಯುಕ್ತರು ಹಾಗು ಹಿರಿಯ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button