
ಹೊನ್ನಾವರ: ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲೂಕು ಭೇಟಿ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರುಗಳನ್ನು ಸ್ವೀಕಾರ ಮಾಡಿ, ವಿಚಾರಣೆ ನಡೆಸುವರು.
ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆ-1 ಮತ್ತು 2 ರಲ್ಲಿ ಭರ್ತಿಮಾಡಿ ನೀಡಬಹುದು. ಸಾರ್ವಜನಿಕರು ತಮ್ಮ ದೂರುಗಳು ಇದ್ದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ