
ಭಟ್ಕಳ: ರಂಗಿನ ಹಬ್ಬ , ಹೋಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮುರುಡೇಶ್ವರ ಪೋಲಿಸ್ ಠಾಣೆಯಲ್ಲಿ ಮಂಗಳವಾರದಂದು ಪಿ.ಎಸ್.ಐ ಹಣಮಂತ ಬಿರಾದಾರ ಸ್ಥಳೀಯ ಹೋಳಿ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪ್ರವಾಸಿಗರಿಗೆ ಇತರೆ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಶಾಂತ ರೀತಿಯಲ್ಲಿ ಹಬ್ಬವನ್ನು ಆಚರಿಸುವಂತೆ ಸಲಹೆ ಸೂಚನೆ ನೀಡಿದರು.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ