ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ

ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆ ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಶಿಪ್ ಯೋಜನೆಯ ಅಡಿಯಲ್ಲಿ ಬಡ ಆಸಕ್ತ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪರೀಕ್ಷೆ ನಡೆಸುತ್ತಿದ್ದು, ಈ ಪರಿಕ್ಷೆಯಲ್ಲಿ ತೆರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಮುರುಡೇಶ್ವರದಲ್ಲಿರುವ ಬೀನಾ ವೈದ್ಯ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಂಕಾಳ್ ವೈದ್ಯ ಅವರು, ಬೀನಾ ವೈದ್ಯ ಏಜುಕೇಷನ್ ಟ್ರಸ್ಟ್ ಪ್ರಾರಂಭಿಸಿದಾಗಿನಿoದಲೂ, ಪಾಲಕರಿಲ್ಲದ ಮಕ್ಕಳಿಗೆ ಹಾಗೂ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದು 2024 ರಿಂದ ಹೊಸ ಯೋಜನೆಯೊಂದನ್ನು ಪ್ರಾರಂಭಿಸಿಸಲಾಗಿದೆ. ಬೀನಾ ವೈದ್ಯ ಅಕ್ಷರಪರ್ವ ಸ್ಕಾಲರ್ಶಿಫ್ ಮೂಲಕ ಕಳೆದ ಸಾಲಿನಲ್ಲಿ ಪ್ರೌಡ ಶಿಕ್ಷಣ, ಪಿಯುಸಿ , ಬಿ ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪರೀಕ್ಷೆಯನ್ನು ನಡೆಸುವ ಮೂಲಕ ತೆರ್ಗಡೆಯಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಪರಿಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲಿಯೇ ಶಿಕ್ಷಣ ಪಡೆಯಲು ಇಚ್ಚಿಸಿದರೆ ಅಂತ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ 10 ಪ್ರತಿಶತ ರಿಯಾಯಿತಿ ನೀಡಲಾಗುತ್ತದೆ.. ನಮ್ಮ ಕ್ಷೇತ್ರವನ್ನು ಹೊರತುಪಡಿಸಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಪರೀಕ್ಷೇಯಲ್ಲಿ ಭಾಗವಹಿಸಬಹುದಾಗಿದೆ. ಕಳೆದ ಬಾರಿ 50 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಉಚಿತ ಪ್ರವೇಶ ಗಿಟ್ಟಿಸಿಕೊಂಡಿದ್ದು, ಅಂತಹ ವಿದ್ಯಾರ್ಥಿಗಳು ಈ ವರ್ಷವು ಉಚಿತವಾಗಿಯೇ ಮುಂದುವರೆಯುತ್ತಾರೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಮ್ ವೈದ್ಯ ಮಾತನಾಡಿ ನಮ್ಮ ಶಿಕ್ಷಣ ಸಂಸ್ಥೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ನೀಡುವುದಾಗಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಸ್ಥಾನ-ಮಾನ ಪಡೆದು ವಿದೇಶದಲ್ಲೂ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಹಣವಿದ್ದವರು ಸುಲಭವಾಗಿ ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆದುಕೊಳ್ಳುತ್ತಾರೆ . ಆದರೆ ಬಡ ಮಕ್ಕಳಿಗೆ ಓದುವ ಆಸೆ, ಸಾಮಥ್ರ್ಯ ಇದ್ದರೂ ಬಡತನದ ಕಾರಣಕ್ಕೆ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ ಅಂತಹ ವಿದ್ಯಾರ್ಥಿಗಳಿಗೆ ನಾವು ಬೆನ್ನೆಲುಬಾಗಿ ನಿಲ್ಲುತ್ತೇವೆ ಎಂದರು.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ