ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿದವ್ರಿಗೆ ಅಡಿಕೆ ಸಸಿ ವಿತರಣೆ

ಹೊನ್ನಾವರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ತಾಲೂಕ ಸರ್ಕಾರಿ ಆಸ್ಪತ್ರೆ ಹೊನ್ನಾವರ ಇವರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ತಾಲೂಕ ಆಸ್ಪತ್ರೆಯಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ ಪ್ರವೀಣ ಕರಾಂಡೆ ರಕ್ತದಾನದ ಮೂಲಕ ಪ್ರಾಣವನ್ನು ಕಾಪಾಡಬಹುದು. ರಾಜ್ಯ ಸರ್ಕಾರಿ ನೌಕರರ ಸಂಘವು ರಕ್ತದಾನ ಶಿಬಿರ ಎರ್ಪಡಿಸುವುದರ ಮೂಲಕ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು ಸಂತೋಷದ ವಿಷಯ ಎಂದರು.
ತಾಲೂಕ ಆಸ್ಪತ್ರೆಯ ಆಡಳಿತಾಧಿಕಾರಿಯಾದ ಡಾ.ರಾಜೇಶ ಕಿಣಿ ಮಾತನಾಡಿ ಇವತ್ತು ರಕ್ತದಾನದ ಅವಶ್ಯಕತೆ ತುಂಬಾ ಇದ್ದು, ಸಾರ್ವಜನಿಕರು ಸಮಸ್ಯೆಯನ್ನು ತಿಳಿದು ರಕ್ತದಾನ ಮಾಡಬೇಕು ಎಂದರು. ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಣ್ಣಪ್ಪ ಮುಕ್ರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಜಿ ನಾಯ್ಕ, ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಶಶಿಕಲಾ ನಾಯ್ಕ ಸೇರಿದಂತೆ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು, ಸದಸ್ಯರು ಹಾಜರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ಸಂಘದ ಪ್ರಸ್ತುತ ಅಧ್ಯಕ್ಷರಾದ ಅಣ್ಣಪ್ಪ ಮುಕ್ರಿ ಹಾಗೂ ಹಿಂದಿನ ಅವಧಿಯ ಅಧ್ಯಕ್ಷರಾದ ಆರ್.ಟಿ.ನಾಯ್ಕ ಅವರನ್ನು ಸನ್ಮಾನಿಸಲಾಯಿತು. ರಕ್ತದಾನದಲ್ಲಿ ಭಾಗವಹಿಸಿದವರೆಲ್ಲರಿಗೂ ಅಡಿಕೆ ಸಸಿಯನ್ಧು ನೀಡಿದ್ದು, ಸುಮಾರು 50ಕ್ಕೂ ಹೆಚ್ಚಿನ ಜನ ರಕ್ತದಾನ ಮಾಡಿದರು.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ