ಬಂಗಾರಮಕ್ಕಿ ಶ್ರೀ ವೀರಾಂಜನೇಯ ದೇವರ ರಥೋತ್ಸವ : ಆಂಜನೇಯನ ಅನುಗ್ರಹಕ್ಕೆ ಪಾತ್ರರಾದ ಅಪಾರ ಭಕ್ತರು

ಹೊನ್ನಾವರ: ತಾಲೂಕಿನ ಗೇರುಸೊಪ್ಪದ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಮಲೆನಾಡು ಉತ್ಸವ ಹಾಗೂ ಹನುಮ ಜಯಂತಿ ಅಂಗವಾಗಿ ಶ್ರೀ ವೀರಾಂಜನೇಯ ದೇವರ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿAದ ಸಂಪನ್ನವಾಯಿತು.
ಮಾರ್ಚ 31 ರಿಂದ ಎಪ್ರಿಲ್ 12ರ ವರೆಗೆ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಸಂಪನ್ನಗೊoಡಿತು. ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಸಾಧಕರಿಗೆ ಪ್ರಶಸ್ತಿ ಹುಡುಕಿಕೊಂಡು ಬರಬೇಕು. ಇದರಿಂದ ಪ್ರಶಸ್ತಿಗೆ ಮೌಲ್ಯ ಸಿಕ್ಕಂತಾಗುತ್ತದೆ ಎಂದರು. ಕ್ಷೇತ್ರದಲ್ಲಿ ಸಾವಿರಾರು ಭಕ್ತರು ತಮ್ಮ ಸೇವೆಗಳನ್ನ ನೀಡಿ ಆಂಜನೇಯನ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ ಎಂದರು.
ರಥೋತ್ಸವ ಸಂದರ್ಭದಲ್ಲಿ ಆಗಮಿಸಿದ ಮಾಜಿ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಪುನಃ ಪ್ರತಿಷ್ಠಾಪನೆ, ಮಲೆನಾಡು ಉತ್ಸವ ಹಾಗೂ ಹನುಮಜಯಂತಿ ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ವೀರಾಂಜನೇಯ ದೇವರ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿAದ ನಡೆಯಿತು. ಇವೆಲ್ಲ ಮಾರುತಿ ಗುರೂಜೀಯವರ ಮಾರ್ಗದರ್ಶನದಲ್ಲಿ ಓಳ್ಳೆಯ ರೀತಿಯಿಂದ ನಡೆಯುತ್ತಿದೆ. ಶ್ರೀ ದೇವರು ಎಲ್ಲರಿಗೂ ಓಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.
ಸಚಿವ ಮಂಕಾಳ ವೈದ್ಯರವರ ಮಗಳಾದ ಬೀನಾ ವೈದ್ಯ ಮಾತನಾಡಿ ಈ ಕ್ಷೇತ್ರಕ್ಕೆ ಮೊದಲನೇ ಬಾರಿ ಬೇಟಿ ನೀಡುತ್ತಿದ್ದೇನೆ. ಇಲ್ಲಿನ ಧಾರ್ಮಿಕ ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದರು. ಸಾಂಪ್ರದಾಯಿಕ ಪೂಜಾ ವಿಧಾನಗಳಿಂದ ದೇವಸ್ಥಾನದ ಆವರಣದಲ್ಲಿ ಪೂಜೆ, ಪುನಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಇರಿಸಿ ಪೂಜಿಸಲಾಯಿತು. ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಪೂಜ್ಯ ಶ್ರೀ ಮಾರುತಿ ಗುರೂಜಿ ಸಾನಿಧ್ಯದಲ್ಲಿ ಉತ್ಸವ ನಡೆಯಿತು. ನಂತರ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಿತು. ಈ ವೇಳೆ ಚಂಡೇವಾದ್ಯ, ನಿರಂತರ ಭಜನೆ, ವೀರಗಾಸೆ, ಸಂಸಾಳೆ ಸೇರಿದಂತೆ ಹಲವು ಜಾನಪದ ಕಲಾ ತಂಡಗಳ ಕಲಾ ಪ್ರದರ್ಶನ ರಥೋತ್ಸವಕ್ಕೆ ಮೆರಗು ತಂದವು.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ