Join Our

WhatsApp Group
Important
Trending

ನಕಲಿ ನೋಟು ಪ್ರಕರಣ: ಮುಂಬೈನಲ್ಲಿ ಆರೋಪಿಯ ಬಂಧನ

ದಾoಡೇಲಿ: ಗಾಂಧಿನಗರದಲ್ಲಿ ಪತ್ತೆಯಾಗಿದ್ದ ನಕಲಿ ನೋಟಿನ ವಾರಸುದಾರನಾದ ಆರೋಪಿ ಅರ್ಷದ್ ಅಜುಂ ಖಾನ್ ಈತನನ್ನು ನಗರ ಠಾಣೆಯ ಪೊಲೀಸರು ಉತ್ತರ ಪ್ರದೇಶದ ಲಕ್ಕೋದಲ್ಲಿ ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಗಾಂಧಿನಗರದ ಮನೆಯೊಂದರಲ್ಲಿ 12 ಕೋಟಿ ಗೂ ಹೆಚ್ಚಿನ ಮೌಲ್ಯದ 500 ರೂಪಾಯಿ ಮುಖ ಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದವು.

ಈ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿ ಅರ್ಷದ್ ಅಜುಂ ಖಾನ್ ತಲೆಮರೆಸಿಕೊಂಡಿದ್ದ. ದಾಂಡೇಲಿ ಅಪರಾಧ ವಿಭಾಗದ ಪಿಎಸ್‌ಐ ಕಿರಣ್ ಪಾಟೀಲ್ ಹಾಗೂ ಹಳಿಯಾಳ ಅಪರಾಧ ವಿಭಾಗದ ಪಿಎಸ್‌ಐ ಕೃಷ್ಣ ಅರಕೇರಿ ಹಾಗೂ ಸಿಬ್ಬಂದಿಗಳು ಈತನ ಬಂಧನಕ್ಕೆ ಬಲೆ ಬೀಸಿದ್ದರು. ಮೊಬೈಲ್ ಟವರ್ ಲೋಕೇಶನ್ ಹಾಗೂ ಆತನ ಹಿಂದಿನ ಇನ್ನಿತರೆ ವ್ಯವಹಾರದ ಆಧಾರದಲ್ಲಿ ಪೊಲೀಸ್ ಅಧಿಕಾರಿಗಳು ಉತ್ತರ ಪ್ರದೇಶದ ಲನ್ನೋದವರೆಗೆ ತೆರಳಿ ಆತನ ಹುಡುಕಾಟ ನಡೆಸಿದ್ದರು. ಪೊಲೀಸರ ಆಗಮನದ ಸುಳಿವು ಪಡೆದಿದ್ದ ಆರೋಪಿ ಅರ್ಷದ್ ಖಾನ್ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ಪೊಲೀಸರು ತಮ್ಮ ಖೆಡ್ಡಕ್ಕೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ದಾಂಡೇಲಿ

Back to top button