ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ

ಕುಮಟಾ: ತಾಲೂಕಿನ ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ದಾಖಲಾತಿ ಪರೀಕ್ಷೆ ಮೇ 10 ರಂದು ನಡೆಯಲಿದೆ. ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಶಾಖಾಮಠದ ಪೂಜ್ಯರಾದ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ, ಮಿರ್ಜಾನ್ ಶಾಖ ಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥಜೀ ಅವರ ಮಾರ್ಗದರ್ಶನದೊಂದಿಗೆ ನಡೆಯುತ್ತಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಇದೀಗ ಪ್ರಸಕ್ತ ಸಾಲಿಗೆ ಕಾಲೇಜಿಗೆ ಹೊಸದಾಗಿ ಬರುವ ವಿದ್ಯಾರ್ಥಿಗಳಿಗಾಗಿ ಪ್ರವೇಶ ದಾಖಲಾತಿ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.
ಸಂಸ್ಥೆಯ ಅಡಿಯಲ್ಲಿ ವಿದ್ಯಾಭ್ಯಾಸ ಮಾಡಬಯಸುವವರು ಈ ಪ್ರವೇಶ ದಾಖಲಾತಿಗೆ ಹಾಜರಿದ್ದು, ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಮೇ 10 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಸ್ಕಾಲರ್ ಶಿಪ್ ಸೌಲಭ್ಯ ಸೇರಿ ಹಲವು ಸೌಲಭ್ಯಗಳಿದ್ದು, ಪಾಲಕರು ಕಾಲೇಜಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. 9900339912, 9731045184, 9901168720, 9739317643, 9591884429
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್