
ಕುಮಟಾ : ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವು ಅವಾಂತರ ಸೃಷ್ಟಿಸುತ್ತಿದೆ. ಇದೀಗ ಕುಮಟಾ ಶಿರಸಿ ರಸ್ತೆಗೆ ಹೊಂದಿಕೊಂಡಿರುವ ಬೆಣ್ಣೆಹೊಳೆ ಉಕ್ಕಿ ಹರಿಯುತ್ತಿದೆ. ಸೇತುವೆ ನಿರ್ಮಾಣಕ್ಕೆಂದು ಕಲ್ಪಿಸಿದ್ದ ಪರ್ಯಾಯ ರಸ್ತೆ ಸಂಪರ್ಕ ಸಂಪೂರ್ಣ ಕೊಚ್ಚಿಹೋಗಿದೆ. ಹೀಗಾಗಿ ಶಿರಸಿ-ಕುಮಟಾ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ವಿಸ್ಮಯ ನ್ಯೂಸ್ ಶಿರಸಿ