Join Our

WhatsApp Group
Important
Trending

ರೆಡ್ ಅಲರ್ಟ್ : ನಾಳೆಯೂ ಶಾಲೆಗಳಿಗೆ ರಜೆ

ಕಾರವಾರ: ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 11-06-2025 ರಿಂದ ದಿನಾಂಕ: 17-06-2025 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ಯನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರ ಪ್ರಸ್ತಾವನೆಯನ್ನು ಸಹ ಪರಿಗಣಿಸಿ, ಮಕ್ಕಳ ಹಿತದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ:13-06-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.

ಆದೇಶ: ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ13-06-2025 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button