
ಶಿರಸಿ: ನಗರದ 23 ವರ್ಷದ ಕೋಮಲ ವಿನೋದ ಪರಮಾರ ಎಂಬ ಯುವತಿ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವಳು ಮರಳಿ ಮನೆಗೆ ಬಂದಿಲ್ಲವೆoಬ ದೂರು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹರಿಯಾಣ ಹ್ಯಾಂಡ್ ಲೂಮ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು ಮನೆಗೆ ಬರದೆ ಕಾಣೆಯಾಗಿರುತ್ತಾಳೆ ಎಂದು ಆಕೆಯ ತಂದೆ ದೂರು ನೀಡಿದ್ದಾರೆ. ಈಕೆಯ ಕುರಿತು ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ